ಬೆಂಗಳೂರು: ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಕೈಗೊಂಡಿರುವ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆ, ಸೆಲ್ಫಿ ಕ್ಲಿಕ್ಕಿಸಿದೆ. ಇದರ ಜೊತೆಗೆ ಭೂಮಿ ಮತ್ತು ಚಂದ್ರನ ಚಿತ್ರಗಳನ್ನು ಹಂಚಿಕೊಂಡಿದೆ.

ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಇಸ್ರೊ ಮಾಹಿತಿ ನೀಡಿದೆ. ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯಲ್ಲಿರುವ ಕ್ಯಾಮೆರಾದಲ್ಲಿ ಚಿತ್ರಗಳನ್ನು ಸೆರೆ ಹಿಡಿಯಲಾಗಿದೆ.

ಆದಿತ್ಯ ಎಲ್–1 ಎರಡನೇ ಹಂತದ ಕಕ್ಷೆಯ ಬದಲಾವಣೆ ಮಂಗಳವಾರ ಯಶಸ್ವಿಯಾಗಿ ನೆರವೇರಿದೆ. ಮುಂದಿನ ಹಂತದ ಕಕ್ಷೆ ಬದಲಾವಣೆ ಸೆ.10 ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ಸೂರ್ಯನತ್ತ ಇಸ್ರೊ...

ಸೆಪ್ಟೆಂಬರ್ 02ರಂದು ಶ್ರೀಹರಿಕೋಟದ ಉಡಾವಣಾ ಕೇಂದ್ರದಿಂದ 'ಆದಿತ್ಯ–ಎಲ್ 1' ಬಾಹ್ಯಾಕಾಶ ನೌಕೆ ಹೊತ್ತ ಪಿಎಸ್‌ಎಲ್‌ವಿ–ಸಿ 57 ರಾಕೆಟ್ ನಭಕ್ಕೆ ಚಿಮ್ಮಿತ್ತು. ಸೂರ್ಯನ ಅಧ್ಯಯನಕ್ಕಾಗಿ ಭಾರತ ನಡೆಸಿದ ಚೊಚ್ಚಲ ಯೋಜನೆ ಇದಾಗಿದೆ.

ಆದಿತ್ಯ ಎಲ್ 1 ಅನ್ನು ಸಂಪೂರ್ಣ ದೇಶೀಯವಾಗಿ ನಿರ್ಮಿಸಲಾಗಿದ್ದು, ಒಟ್ಟು ಏಳು ಉಪಕರಣಗಳು ಇರಲಿವೆ. ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಗ್ರಾಂಜಿಯನ್ ಬಿಂದುವಿನಲ್ಲಿ ಆದಿತ್ಯ ಎಲ್–1 ಅಂತರಿಕ್ಷ ವೀಕ್ಷಣಾಲಯವನ್ನುಇರಿಸಲಾಗುತ್ತದೆ. ಲಗ್ರಾಂಜಿಯನ್ ಬಿಂದು ಸೇರಲು 125 ದಿನ ಬೇಕಾಗುತ್ತದೆ. ಇದು ಯಾವುದೇ ಅಡಚಣೆ ಇಲ್ಲದೆ ನಿರಂತರವಾಗಿ ಸೂರ್ಯನಲ್ಲಿ ನಡೆಯುವ ಸೌರ ಚಟುವಟಿಕೆಗಳನ್ನು ಗಮನಿಸುತ್ತದೆ.

ನಾಲ್ಕು ಪ್ರತ್ಯೇಕ ಉಪಕರಣಗಳಿಂದ ಸೂರ್ಯನ ಪ್ರಭಾಗೋಳ, ವರ್ಣಗೋಳ ಮತ್ತು ಕಿರೀಟದ ಅಧ್ಯಯನವನ್ನು ನಿರಂತರವಾಗಿ ನಡೆಸಲಿದೆ. ಉಳಿದ ಮೂರು ಉಪಕರಣಗಳು ಅಯಸ್ಕಾಂತ ಕ್ಷೇತ್ರ ಮತ್ತು ಕಣ ಪ್ರವಾಹದ ವೀಕ್ಷಣೆ ನಡೆಸುತ್ತವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.