ಬೆಂಗಳೂರು: ವೈಮಾನಿಕ ವಿಜ್ಞಾನ, ಫ್ಲೂಯಿಡ್ ಡೈನಮಿಕ್ಸ್ ಮತ್ತು ಮೋಡಗಳ ರಚನೆಯ ಕುರಿತು ಅಂತರ ರಾಷ್ಟ್ರೀಯ ಮಟ್ಟದ ಸಂಶೋಧನೆಗಳನ್ನು ನಡೆಸಿದ್ದ ಹೆಸರಾಂತ ವಿಜ್ಞಾನಿ ಪ್ರೊ.ರೊದ್ದಂ ನರಸಿಂಹ (87)ಸೋಮವಾರ ರಾತ್ರಿ ನಿಧನರಾದರು.

ಒಂದು ತಿಂಗಳ ಹಿಂದೆ ಅನಾರೋಗ್ಯದಿಂದ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಮೆದುಳಿನ ರಕ್ತ ಸ್ರಾವದಿಂದ ಪ್ರಜ್ಞಾಹೀನ ಸ್ಥಿತಿ ತಲುಪಿದ್ದ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರಾತ್ರಿ 9.30ರ ವೇಳೆಗೆ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.

ನರಸಿಂಹ ಅವರು 1933 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಬಾಲ್ಯದಲ್ಲೇ ವಿಜ್ಞಾನದ ಬಗ್ಗೆ ತಮ್ಮ ತಂದೆ ಹಾಗೂ ವಿಜ್ಞಾನದ ಹೆಸರಾಂತ ಲೇಖಕರಾಗಿದ್ದ ಆರ್. ಎಲ್. ನರಸಿಂಹಯ್ಯ ಅವರಿಂದ ಪ್ರಭಾವಿತರಾಗಿದ್ದರು. 1953 ರಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವಿ ಪಡೆದರು.1955 ರಲ್ಲಿ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಏರೋನಾಟಿಕಲ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಮಾಡಿದರು. 1962 ರಿಂದ 1999 ರವರೆಗೆ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಏರೋಸ್ಪೇಸ್ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದರು. 1984 ರಿಂದ 1993 ರವರೆಗೆ ರಾಷ್ಟ್ರೀಯ ವೈಮಾನಿಕ ಪ್ರಯೋಗಾಲಯ(ಎನ್ಎಎಲ್)ದ ನಿರ್ದೇಶಕರಾಗಿದ್ದರು. 2000 ರಿಂದ 2014 ರವರೆಗೆ ಬೆಂಗಳೂರಿನ ಜೆಎನ್ಸಿಎಎಸ್ಆರ್ನ ಎಂಜಿನಿಯರಿಂಗ್ ಮೆಕ್ಯಾನಿಕ್ಸ್ ವಿಭಾಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ರಾಜೀವ್ಗಾಂಧಿ ಪ್ರಧಾನ ಮಂತ್ರಿ ಆಗಿದ್ದಾಗ ಅವರ ವೈಜ್ಞಾನಿಕ ಸಲಹಾ ಮಂಡಳಿಯ ಸದಸ್ಯರಾಗಿದ್ದರು. 1992–1994ರವರೆಗೆ ಇಂಡಿಯನ್ ಅಕಾಡೆಮಿ ಆಫ್ ಸೈನ್ಸಸ್ನ ಅಧ್ಯಕ್ಷರಾಗಿದ್ದರು. ಇಸ್ರೊ ಮತ್ತು ನಿಯಾಸ್ನಲ್ಲೂ ಸೇವೆ ಸಲ್ಲಿಸಿದ್ದರು.

ಭಾರತದಲ್ಲಿ ಸಾಮಾನ್ಯ ಜನರೂ ವಿಮಾನಯಾನ ಮಾಡಬೇಕು. ಸಣ್ಣ ನಗರಗಳ ಮಧ್ಯೆ ವಿಮಾನ ಸಂಚಾರ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ವಿಮಾನಯಾನದ ವೆಚ್ಚ ಕಡಿಮೆ ಮಾಡುವ ನಿಟ್ಟಿನಲ್ಲಿ ಅದರ ರಚನೆ ಮತ್ತು ಏರೋಡೈನಮಿಕ್ಸ್ನಲ್ಲಿ ಸಾಕಷ್ಟು ಮಾರ್ಪಾಡುಗಳನ್ನು ಮಾಡಿದ್ದರು. ಭಾರತ ಸರ್ಕಾರದ ಉಡಾನ್ ಯೋಜನೆಗೂ ಸಲಹೆ ನೀಡಿದ್ದರು. ಕಳೆದ 15 ವರ್ಷಗಳಿಂದ ಮೋಡಗಳ ಬಗ್ಗೆ ಸಂಶೋಧನೆಯಲ್ಲಿ ನಿರತರಾಗಿದ್ದರು. ಭಾರತೀಯ ತತ್ವಶಾಸ್ತ್ರ ಮತ್ತು ಪ್ರಾಚೀನ ಭಾರತದ ವಿಜ್ಞಾನಗಳ ಬಗ್ಗೆ ಸಾಕಷ್ಟು ಅಧ್ಯಯನ ನಡೆಸಿದ್ದರು.

ಭಾರತ ಸರ್ಕಾರದ ಪದ್ಮಭೂಷಣ, ಪದ್ಮವಿಭೂಷಣ ಸೇರಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅವರು ಪತ್ನಿ ನೀಲಿಮಾ ಮತ್ತು ಪುತ್ರಿ ಮೈತ್ರೇಯಿ ಅವರನ್ನು ಅಗಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.