ನವದೆಹಲಿ: ಮೆಟಾ ಒಡೆತನದ ಫೋಟೊ ಶೇರಿಂಗ್ ಅಪ್ಲಿಕೇಶನ್ ಇನ್ಸ್ಟಾಗ್ರಾಂ ಸೇವೆಯಲ್ಲಿ ಬುಧವಾರ ವ್ಯತ್ಯಯ ಉಂಟಾಗಿದೆ.

ವೆಬ್ಸೈಟ್ ಹಾಗೂ ಸೇವೆಗಳ ಸ್ಥಿತಿಯ ಕುರಿತು ಮಾಹಿತಿ ಒದಗಿಸುವ 'ಡೌನ್ ಡಿಟೆಕ್ಟರ್' ಪ್ರಕಾರ, ಅತ್ಯಂತ ಜನಪ್ರಿಯ ಸಾಮಾಜಿಕ ಮಾಧ್ಯಮಗಳಲ್ಲಿ ಒಂದಾಗಿರುವ ಇನ್ಸ್ಟಾಗ್ರಾಂ ಸೇವೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬುಧವಾರ ವ್ಯತ್ಯಯ ಉಂಟಾಗಿದೆ.

ಬೆಂಗಳೂರು, ನವದೆಹಲಿ, ಹೈದರಾಬಾದ್, ಮುಂಬೈ, ಪಾಟ್ನಾ ಸೇರಿದಂತೆ ಹಲವು ನಗರಗಳಲ್ಲಿ ಅಡಚಣೆ ಎದುರಾಗಿದೆ ಎಂದು ಮಾಹಿತಿ ಒದಗಿಸಿದೆ.

ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹಲವು ಬಳಕೆದಾರರು ದೂರಿದ್ದಾರೆ. ಈ ಕುರಿತು ಟ್ವಿಟರ್ನಲ್ಲಿ ಚರ್ಚಿಸಿದ್ದಾರೆ.

ಟ್ವಿಟರ್ನಲ್ಲಿ #instagramdown ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.