ನ್ಯೂಯಾರ್ಕ್: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಜೊತೆಗೆ ಡೇಟಿಂಗ್ ವದಂತಿಯನ್ನು ಟೆಸ್ಲಾ ಸಿಇಒ ಎಲಾನ್ ಮಸ್ಕ್ ತಳ್ಳಿಹಾಕಿದ್ದಾರೆ.

‘ನಾವು ಡೇಟಿಂಗ್ ನಡೆಸುತ್ತಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಂಗಳವಾರ(ಸೆ.24) ನ್ಯೂಯಾರ್ಕ್‌ನಲ್ಲಿ ನಡೆದ ಅಟ್ಲಾಂಟಿಕ್ ಕೌನ್ಸಿಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಸ್ಕ್ ಮತ್ತು ಮೆಲೋನಿ ಭಾಗವಹಿಸಿದ್ದರು. ಈ ವೇಳೆ ಇಬ್ಬರು ಆತ್ಮೀಯವಾಗಿ ಮಾತನಾಡುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಡೇಟಿಂಗ್ ವದಂತಿಗಳು ಹುಟ್ಟುಕೊಂಡಿದ್ದವು.

‘ಟೆಸ್ಲಾ ಒನರ್ಸ್ ಸಿಲಿಕಾನ್ ವ್ಯಾಲಿ’ ತನ್ನ ಎಕ್ಸ್ ಖಾತೆಯಲ್ಲಿ ಈ ಫೋಟೊವನ್ನು ಹಂಚಿಕೊಂಡಿದ್ದು, ‘ಇವರಿಬ್ಬರು ಡೇಟಿಂಗ್ ನಡೆಸುತ್ತಿದ್ದಾರೆ ಎಂದು ನೀವು ಭಾವಿಸುತ್ತೀರಾ?’ ಎಂದು ಕೇಳಿತ್ತು.

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಮಸ್ಕ್, ನಾವು ಡೇಟಿಂಗ್ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ.

ಮೆಲೋನಿ ಅವರನ್ನು ಬಾಯ್ತುಂಬ ಹೊಗಳಿದ್ದ ಮಸ್ಕ್

ಜಾರ್ಜಿಯಾ ಮೆಲೋನಿ ಅವರಿಗೆ ‘ಅಟ್ಲಾಂಟಿಕ್ ಕೌನ್ಸಿಲ್ ಗ್ಲೋಬಲ್ ಸಿಟಿಜನ್’ ಪ್ರಶಸ್ತಿ ನೀಡಿ ಮಾತನಾಡಿದ ಎಲಾನ್ ಮಸ್ಕ್, ‘ಬಾಹ್ಯವಾಗಿ ಕಾಣುವುದಕ್ಕಿಂತ ಆಂತರಿಕವಾಗಿ ಹೆಚ್ಚು ಸುಂದರವಾಗಿರುವವರಿಗೆ ಈ ಪ್ರಶಸ್ತಿಯನ್ನು ಕೊಡುವುದು ಗೌರವದ ಸಂಗತಿಯಾಗಿದೆ’ ಎಂದು ಹೇಳಿದ್ದಾರೆ.

‘ಮೆಲೋನಿ ಅವರು ನಾನು ಮೆಚ್ಚುವ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ಸತ್ಯ ಮತ್ತು ಪ್ರಾಮಾಣಿಕ ವ್ಯಕ್ತಿತ್ವ ಅವರದ್ದಾಗಿದೆ. ಇಟಲಿಯ ಪ್ರಧಾನಿಯಾಗಿ ಅವರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ’ ಎಂದು ಮಸ್ಕ್ ಹೇಳಿದ್ದಾರೆ.

ಇಟಲಿಯ ಮೊದಲ ಮಹಿಳಾ ಪ್ರಧಾನಿಯಾಗಿ ಐರೋಪ್ಯ ಒಕ್ಕೂಟಕ್ಕೆ ಬೆಂಬಲವಾಗಿ ನಿಂತಿರುವುದಕ್ಕೆ ಮೆಲೋನಿಯವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ಅಟ್ಲಾಂಟಿಕ್ ಕೌನ್ಸಿಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.