ಬೆಂಗಳೂರು: ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅವರು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಭಾರತೀಯರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹಿಂದಿಕ್ಕಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ ನಟಿ ಶ್ರದ್ಧಾ ಕಪೂರ್ ಅವರಿಗೆ 9.14 ಕೋಟಿ ಹಿಂಬಾಲಕರಿದ್ದು, ಪ್ರಧಾನಿ ಮೋದಿ 9.13 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ. ಇದೀಗ ಭಾರತದಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವವರ ಪಟ್ಟಿಯಲ್ಲಿ ಶ್ರದ್ಧಾ ಮೂರನೇ ಸ್ಥಾನದಲ್ಲಿದ್ದಾರೆ.

ಕ್ರಿಕೆಟಿಗ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಜೋನ್ಸ್ ಅವರು ಇನ್‌ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿದ ಭಾರತೀಯರಲ್ಲಿ ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದಾರೆ. ವಿರಾಟ್‌ಗೆ 27.1 ಕೊಟಿ ಹಾಗೂ ಪ್ರಿಯಾಂಕಾ ಚೋಪ್ರಾ ಅವರಿಗೆ 9.18 ಕೋಟಿ ಹಿಂಬಾಲಕರಿದ್ದಾರೆ.

ಶ್ರದ್ಧಾ ಕಪೂರ್ ನಟಿಸಿದ್ದ ‘ಸ್ತ್ರೀ 2’ ಚಿತ್ರವು ₹300 ಕೋಟಿ ಗಳಿಸುವ ಮೂಲಕ ಬಾಕ್ಸ್‌ಆಫೀಸ್‌ನಲ್ಲಿ ಸದ್ದು ಮಾಡಿದ ನಂತರ ಅವರ ಹಿಂಬಾಲಕರ ಸಂಖ್ಯೆ ಹೆಚ್ಚಾಗಿದೆ ಎಂದೆನ್ನಲಾಗಿದೆ.

‘ಸ್ತ್ರೀ 2’ ಸಿನಿಮಾವು 2018ರಲ್ಲಿ ಬಿಡುಗಡೆಯಾಗಿದ್ದ ಹಾರರ್ ಕಾಮಿಡಿ ಚಿತ್ರ ‘ಸ್ತ್ರೀ’ ಮುಂದುವರಿದ ಭಾಗವಾಗಿದೆ.

ಆ್ಯಕ್ಷನ್ ಸಿನಿಮಾಗಳಾದ ‘ಸಾಹೋ‘, ‘ಬಾಗಿ– 3‘ ಚಿತ್ರಗಳಲ್ಲಿ ನಟಿಸುವ ಮೂಲಕ ಶ್ರದ್ಧಾ, ಸಿನಿ ಪ್ರಿಯರ ಗಮನ ಸೆಳೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.