ನವದೆಹಲಿ: ಖಾತೆಗಳನ್ನು ಬ್ಲಾಕ್ ಮಾಡುವುದರ ಕುರಿತು ಟ್ವಿಟರ್ ಮತ್ತು ಸರ್ಕಾರದ ನಡುವೆ ಜಟಾಪಟಿ ಮುಂದುವರಿದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ ಪ್ರಸಾದ್ ಅವರು, ‘ಸಾಮಾಜಿಕ ಜಾಲತಾಣಗಳು ಈ ನೆಲದ ಕಾನೂನಿಗೆ ಬದ್ಧವಾಗಿರುವುದು ಕಡ್ಡಾಯ. ಇಲ್ಲದಿದ್ದರೆ ಕಟ್ಟುನಿಟ್ಟಿನ ಕ್ರಮಜರುಗಿಸಲಾಗು ವುದು’ ಎಂದು ಎಚ್ಚರಿಸಿದ್ದಾರೆ.

ನಾವು ಸಾಮಾಜಿಕ ಜಾಲತಾಣವನ್ನು ಗೌರವಿಸುತ್ತೇವೆ. ಇದು, ಜನರನ್ನು ಸಬಲೀಕರಣಗೊಳಿಸಿದೆ. ಆದರೆ, ಸಾಮಾಜಿಕ ಜಾಲತಾಣವನ್ನು ಸುಳ್ಳು ಸುದ್ದಿಗಳ ಪ್ರಚಾರ, ಹಿಂಸೆ ಹೆಚ್ಚಲು ಬಳಸಲಾಗುತ್ತಿದೆ. ಇಂಥ ಸಂದರ್ಭಗಳಲ್ಲಿ ಅವುಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದರು.

ಟ್ವಿಟರ್ ವಿರುದ್ಧ ಹರಿಹಾಯ್ದ ಅವರು, ಆಡಳಿತ ಮಂಡಳಿಯು ಹಿಂಸೆಯನ್ನು ಖಂಡಿಸುವ ವಿಷಯದಲ್ಲಿ ದ್ವಿಮುಖ ನೀತಿಯನ್ನು ಹೊಂದಿದೆ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.