ಮುಂಬೈ: ಜನಪ್ರಿಯ ಇ –ಕಾಮರ್ಸ್ ಕಂಪನಿಗಳಾದ ಅಮೆಜಾನ್, ಫ್ಲಿಪ್ಕಾರ್ಟ್ ವಿರುದ್ಧ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅಭಿಮಾನಿಗಳು ತೀವ್ರವಾಗಿ ಮುಗಿಬಿದ್ದಿದ್ದಾರೆ.

ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತು ಖಿನ್ನತೆಯಿಂದ ಕೂಡಿರುವ ಭಾವಚಿತ್ರಗಳನ್ನು ಮುದ್ರಿಸಿ ಟಿ–ಶರ್ಟ್ಗಳನ್ನು ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಸುಶಾಂತ್ ಅಭಿಮಾನಿಗಳು ಟ್ವಿಟರ್ನಲ್ಲಿ ಅಮೆಜಾನ್, ಫ್ಲಿಪ್ಕಾರ್ಟ್ ಬಾಯ್ಕಾಟ್ ಅಭಿಯಾನ ಆರಂಭಿಸಿದ್ದಾರೆ.

#BoycottFlipkart ಹಾಗೂ #BoycottAmazon ಹ್ಯಾಶ್ಟ್ಯಾಗ್ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ. ಅನೇಕರು ಅಮೆಜಾನ್, ಫ್ಲಿಪ್ಕಾರ್ಟ್ ಬಾಯ್ಕಾಟ್ ಅಭಿಯಾನಕ್ಕೆ ಸಾಥ್ ನೀಡುತ್ತಿದ್ದಾರೆ.

‘ಸುಶಾಂತ್ ಅವರ ದುರಂತ ಸಾವಿನ ಆಘಾತದಿಂದ ಅಭಿಮಾನಿಗಳು ಇನ್ನೂ ಹೊರಬಂದಿಲ್ಲ. ನ್ಯಾಯಕ್ಕಾಗಿ ಧ್ವನಿ ಎತ್ತುತ್ತಲೇ ಇರುತ್ತೇವೆ. ಈ ಹೇಯ ಕೃತ್ಯಕ್ಕೆ ಫ್ಲಿಪ್ಕಾರ್ಟ್ ನಾಚಿಕೆಪಡಬೇಕು ಮತ್ತು ಇಂತಹ ಘಟನೆ ಮರುಕಳಿಸದಂತೆ ಕ್ಷಮೆಯಾಚಿಸಬೇಕು ಎಂದು ಕಶ್ಯಪ್ ಎಂಬುವರು ಟ್ವೀಟ್ ಮಾಡಿದ್ದಾರೆ.

ಫ್ಲಿಪ್ಕಾರ್ಟ್ ನೀವು ಮೃತಪಟ್ಟ ವ್ಯಕ್ತಿಯೊಬ್ಬರ ಭಾವಚಿತ್ರ ಬಳಸಿಕೊಂಡು ನಿಮ್ಮ ಉತ್ಪನ್ನದ ಮಾರ್ಕೆಟಿಂಗ್ ಮಾಡಲು ಸಾಧ್ಯವಿಲ್ಲ. ಒಮ್ಮೆ ನಿಮ್ಮ ಮನೆಯವರ ಕುರಿತು ಯೋಚಿಸಿ’ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ಜೂನ್ 14, 2020 ರಂದು ಮುಂಬೈನ ಬಾಂದ್ರಾದ ಅಪಾರ್ಟ್ಮೆಂಟ್ನಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಸುಶಾಂತ್ ಕುಟುಂಬದವರು ನಟಿ ರಿಯಾ ಚಕ್ರವರ್ತಿ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಸಿಬಿಐ ಅಧಿಕಾರಿಗಳು ರಿಯಾಳನ್ನು ಬಂಧಿಸಿ 28 ದಿನ ಜೈಲಿಗೆ ಕಳುಹಿಸಿತ್ತು. ಸದ್ಯ ರಿಯಾ ಅವರು ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ.

ಇವನ್ನೂ ಓದಿ...

*ವಿಶ್ವದಾದ್ಯಂತ ತೆರೆಕಂಡ ವಿಕ್ರಾಂತ್ ರೋಣ: ಸುದೀಪ್ಗೆ ಶುಭ ಹಾರೈಸಿದ ರಾಜಮೌಳಿ

*ವಿಕ್ರಾಂತ್ ರೋಣ Twitter Review: ಸುದೀಪ್ ನಟನೆಗೆ ಬಹುಪರಾಕ್ ಎಂದ ಪ್ರೇಕ್ಷಕರು

*ಗಂಡಸರಂತೆ ಮೀಸೆ ಬೆಳೆಸಿಕೊಂಡ ಮಹಿಳೆ: ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ವೈರಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.