ದುಬೈ: ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರಿಗೆ ಸೇರಿದ ಖಾತೆಯನ್ನು ಟ್ವಿಟರ್ ಅಮಾನತುಗೊಳಿಸಿದೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನೇ ಹೋಲುವ ವ್ಯಕ್ತಿಯೊಬ್ಬರು ಡ್ರೋನ್‌ನ ನೆರಳಿನಡಿ ಗಾಲ್ಫ್ ಆಡುತ್ತಿರುವ ಚಿತ್ರವೊಂದನ್ನು ಹಂಚಿಕೊಂಡ ಬೆನ್ನಲ್ಲೇ ಖಾತೆಯನ್ನು ಟ್ವಿಟರ್ ಅಮಾನತಿನಲ್ಲಿರಿಸಿದೆ.

ಖಮೇನಿ ಅವರ ವೆಬ್‌ಸೈಟ್ ಜತೆ ಲಿಂಕ್ ಆಗಿರುವ ಟ್ವಿಟರ್ ಖಾತೆಯಲ್ಲಿ ಪರ್ಷಿಯನ್ ಭಾಷೆಯಲ್ಲಿ ಮಾಡಲಾದ ಪೋಸ್ಟ್‌ನಲ್ಲಿ ‘ಸೇಡು ತೀರಿಸಿಕೊಳ್ಳುವುದು ನಿಶ್ಚಿತ’ ಎಂದು ಉಲ್ಲೇಖಿಸಲಾಗಿತ್ತು.

ಇರಾನ್‌ನ ಉನ್ನತ ಸೇನಾಧಿಕಾರಿ ಮೇಜರ್ ಜನರಲ್ ಖಾಸಿಂ ಸುಲೆಮಾನಿ ಅವರನ್ನು ಅಮೆರಿಕವು ರಾಕೆಟ್ ದಾಳಿ ನಡೆಸಿ ಬಾಗ್ದಾದ್‌ನಲ್ಲಿ ಹತ್ಯೆ ಮಾಡಿತ್ತು. ಇದಕ್ಕೆ ಅಮೆರಿಕದ ವಿರುದ್ಧ ಪ್ರತೀಕಾರ ತೀರಿಸುವುದಾಗಿ ಅಲಿ ಖಮೇನಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.