ಬೆಂಗಳೂರು: ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್‌ಆ್ಯಪ್, ಕಳೆದ ನವೆಂಬರ್‌ನಲ್ಲಿ ಭಾರತದಲ್ಲಿ 37.16 ಲಕ್ಷ ಖಾತೆಗಳನ್ನು ನಿರ್ಬಂಧಿಸಿದೆ.

ಅಕ್ಟೋಬರ್ ತಿಂಗಳಿಗೆ ಹೋಲಿಸಿದರೆ, ನಿರ್ಬಂಧಿಸಲಾದ ಖಾತೆಗಳ ಸಂಖ್ಯೆಯಲ್ಲಿ ಶೇ 60ರಷ್ಟು ಹೆಚ್ಚಳವಾಗಿದೆ.

ಭಾರತದಲ್ಲಿ 9.9 ಲಕ್ಷ ಖಾತೆಗಳನ್ನು ಬಳಕೆದಾರರು ರಿಪೋರ್ಟ್ ಮಾಡುವ ಮೊದಲೇ, ವಾಟ್ಸ್‌ಆ್ಯಪ್ ನಿಷೇಧಿಸಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ 2021ರ ಪ್ರಕಾರ, ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಸರ್ಕಾರದ ನಿರ್ಬಂಧಗಳನ್ನು ಉಲ್ಲಂಘಿಸುವ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

ಹೀಗೆ ಕ್ರಮ ಕೈಗೊಂಡಿರುವ ಕುರಿತು ಸಂಸ್ಥೆ ಪ್ರತಿ ತಿಂಗಳು ವರದಿ ನೀಡಬೇಕಿದೆ.

‘ವಾಟ್ಸ್‌ಆ್ಯಪ್ ಪೇ’ ಭಾರತದ ಮುಖ್ಯಸ್ಥ ವಿನಯ್ ಚೊಲೆಟ್ಟಿ ರಾಜೀನಾಮೆ

ಅಕ್ಟೋಬರ್‌ನಲ್ಲಿ ದೇಶದಲ್ಲಿ 23.24 ಲಕ್ಷ ವಾಟ್ಸ್‌ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿತ್ತು.

ಅಕ್ಟೋಬರ್‌ನಲ್ಲಿ 23 ಲಕ್ಷ ವಾಟ್ಸ್‌ಆ್ಯಪ್ ಖಾತೆ ನಿಷೇಧ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್‌ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.