ಕೊಟ್ಟಾಯಂ: ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಮಾವುತನೊಬ್ಬನ ಅಂತ್ಯಕ್ರಿಯೆಯ ಸ್ಥಳಕ್ಕೆ ಧಾವಿಸಿದ ಗಜರಾಜ, ಕಣ್ಣೀರ ವಿದಾಯ ನೀಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.

ಕಳೆದ 25 ವರ್ಷಗಳಿಂದ ಈ ಆನೆಯ ಪರಿಪಾಲನೆಯನ್ನು ಮಾವುತ ದಾಮೋದರ್ ನಾಯರ್ ನೋಡಿಕೊಳ್ಳುತ್ತಿದ್ದರು. 74 ವರ್ಷದ ದಾಮೋದರ್ ಇಹಲೋಕ ತ್ಯಜಿಸಿದಾಗ ಮೂಕ ಪ್ರಾಣಿಯುಮಾವುತನಿಗೆ ಭಾವನಾತ್ಮಕ ಅಶ್ರುತರ್ಪಣಗೈದ ವಿಡಿಯೊ ಎಂಥಹ ಕಲ್ಲು ಹೃದಯವನ್ನು ಕರಗಿಸಿಬಿಡುತ್ತದೆ.

ಬ್ರಹದತ್ತನ್ ಎಂಬ ಆನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾವುತನ ಮೇಲೆ ಆನೆ ತೋರಿಸಿರುವ ಪ್ರೀತಿಗೆ ಸ್ಥಳೀಯ ನಿವಾಸಿಗಳು ಸೇರಿದಂತೆ ಎಲ್ಲರೂ ಮನಸೋತಿದ್ದಾರೆ.

ಇದನ್ನೂ ಓದಿ:ಗಜರಾಜನ ದಾರಿಯಲ್ಲಿ ಅಡ್ಡವಾಗಿ ಮಲಗಿದ್ದ ಕಾಡಿನ ರಾಜ; ಮುಂದೇನಾಯ್ತು ನೋಡಿ..!

ಮನೆಯಲ್ಲಿ ಪಾರ್ಥಿವ ಶರೀರವನ್ನು ನೋಡಲು ಬಂದ ಆನೆ ಕಣ್ಣೀರಿಟ್ಟಿತ್ತಲ್ಲದೆ ಸೊಂಡಿಲಿನಿಂದ ಮೃತದೇಹವನ್ನು ಸ್ಪರ್ಶಿಸಿ ಮೇಲಕ್ಕೆ ಎತ್ತಿಹಿಡಿದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.