ಶಾಂಘೈ: ಚೀನಾದಲ್ಲಿ 71 ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರವಾಹ ಭೀತಿ ಎದುರಾಗಿದೆ ಎಂದು ಕ್ಸಿನುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

‘ಜಾಗತಿಕ ತಾಪಮಾನದಿಂದಾಗಿ ಹವಾಮಾನದಲ್ಲಿ ತೀವ್ರ ಏರುಪೇರು ಉಂಟಾಗಲಿದೆ’ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

‘ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇಕಡ 10ರಷ್ಟು ಕಡಿಮೆ ಮಳೆ ಸುರಿದಿದೆ. ಆದರೆ, ಇತ್ತೀಚಿಗೆ ಮಧ್ಯ ಮತ್ತು ದಕ್ಷಿಣ ಚೀನಾದ ಕೆಲವು ಭಾಗಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ’ ಎಂದು ಜಲಸಂಪನ್ಮೂಲ ಸಚಿವಾಲಯವು ತಿಳಿಸಿದೆ.

‘ಮುಂದಿನ ವಾರದಲ್ಲಿ ಯಾಂಗ್ಟ್ಜೆ ಮತ್ತು ಅದರ ಉಪನದಿಗಳಲ್ಲಿ ನೀರಿನ ಮಟ್ಟ ಇನ್ನಷ್ಟು ಹೆಚ್ಚಾಗಲಿದೆ. ಚೀನಾದಲ್ಲಿ ಜೂನ್‌ನಿಂದ ಆಗಸ್ಟ್ ತಿಂಗಳಲ್ಲಿ ಪ್ರವಾಹ ಸಂಭವಿಸುವ ಸಾಧ್ಯತೆಗಳಿವೆ’ ಎಂದು ಸಚಿವಾಲಯ ಎಚ್ಚರಿಕೆ ನೀಡಿದೆ.

‘ಮಧ್ಯ ಚೀನಾದ ಯಾಂಗ್ಟ್ಜೆ ನದಿ ಭಾಗದಲ್ಲಿರುವ ವುಹಾನ್ ನಗರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯಲಿದೆ’ ಎಂದು ಕೆಲವೊಂದು ಹವಾಮಾನ ಮುನ್ನೆಚ್ಚರಿಕೆ ಕೇಂದ್ರಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.