ಲಂಡನ್: ಮೆಟಾ ಒಡೆತನದ ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್ ಹಾಗೂ ಟ್ವಿಟರ್ನಿಂದ ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಹತ್ಯೆ ವಿಡಿಯೊವನ್ನು ತೆರವುಗೊಳಿಸಲಾಗಿದೆ.

ಹಾನಿಕಾರಕ ಅಂಶಗಳನ್ನು ಒಳಗೊಂಡಿರುವ ಕಾರಣ ಟ್ವಿಟರ್ ಹಾಗೂ ಫೇಸ್ಬುಕ್ನಿಂದ ಶಿಂಜೊ ಅಬೆ ಹತ್ಯೆ ವಿಡಿಯೊವನ್ನು ತೆರವುಗೊಳಿಸಲಾಗಿದೆ ಎಂದು ಮೆಟಾ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ:ಶಿಂಜೊ ಅಬೆ ನಿಧನ: ನಾಳೆ ದೇಶದಾದ್ಯಂತ ಶೋಕಾಚರಣೆ ಘೋಷಿಸಿದ ಪ್ರಧಾನಿ ಮೋದಿ

ನಾರಾ ಎಂಬಲ್ಲಿ ಶುಕ್ರವಾರ ಚುನಾವಣಾ ಪ್ರಚಾರದ ವೇಳೆ ದುಷ್ಕರ್ಮಿ ಗುಂಡೇಟಿಗೆ ಶಿಂಜೊ ಅಬೆ ಹತ್ಯೆಯಾಗಿದ್ದರು. ಘಟನೆ ಸಂಬಂಧ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ.

ಶಿಂಜೊ ಅಬೆ ಹತ್ಯೆ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ನಮ್ಮ ಫ್ಲ್ಯಾಟ್ಫಾರ್ಮ್ನಲ್ಲಿ ಯಾವುದೇ ಹಿಂಸಾತ್ಮಕ ನಡವಳಿಕೆಯನ್ನು ಸಹಿಸುವುದಿಲ್ಲ. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ಆಕ್ಷೇಪಾರ್ಹ ವಿಷಯಗಳನ್ನು ತೆಗೆದು ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಮೆಟಾ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.