ಇಸ್ಲಾಮಾಬಾದ್: ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಉಸ್ತುವಾರಿ ಪ್ರಧಾನಿ ನೇಮಕ ಪ್ರಕ್ರಿಯೆಗೆ ಸೋಮವಾರ ಚಾಲನೆ ಸಿಕ್ಕಿದೆ.ಪ್ರಧಾನಿ ಇಮ್ರಾನ್ ಖಾನ್ ಅವರು,ಉಸ್ತುವಾರಿ ಪ್ರಧಾನಿ ಹುದ್ದೆಗೆ ಮಾಜಿ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹಮದ್ ಅವರನ್ನು ಸೋಮವಾರ ನಾಮನಿರ್ದೇಶನ ಮಾಡಿದ್ದಾರೆ.

ಉಸ್ತುವಾರಿ ಪ್ರಧಾನಿ ಹುದ್ದೆಗೆ ಹೆಸರು ಸೂಚಿಸುವಂತೆ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ಅವರು ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪ್ರತಿಪಕ್ಷದ ಮುಖ್ಯಸ್ಥ ಶಹಬಾಝ್ಶರೀಫ್ ಅವರಿಗೆ ಸೂಚಿಸಿದ್ದರು. ಆದರೆ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಶಹಬಾಝ್ ಅವರು ನಿರಾಕರಿಸಿದ್ದು, ಇದು ಅಕ್ರಮ ಎಂದು ಪ್ರತಿಪಾದಿಸಿದ್ದಾರೆ.

ಪಾಕ್: ಸಂಸತ್ ವಿಸರ್ಜನೆ ಪ್ರಕರಣ ‘ಸುಪ್ರೀಂ’ನಲ್ಲಿ ವಿಚಾರಣೆ ಶುರು

ಪ್ರಧಾನಿ ಹಾಗೂ ಪ್ರತಿಪಕ್ಷದ ಮುಖ್ಯಸ್ಥರ ಜತೆ ಸಮಾಲೋಚನೆ ನಡೆಸಿ ಉಸ್ತುವಾರಿ ಪ್ರಧಾನಿಯನ್ನು ನೇಮಕ ಮಾಡುವ ಅಧಿಕಾರವನ್ನು ಪಾಕಿಸ್ತಾನದ ಸಂವಿಧಾನವು ಅಲ್ಲಿನ ಅಧ್ಯಕ್ಷರಿಗೆ ಒದಗಿಸಿದೆ. ಸಂವಿಧಾನದ 224ಎ(1)ರ ಪ್ರಕಾರ,ಉಸ್ತುವಾರಿ ಸರ್ಕಾರವು ಚುನಾವಣೆಯನ್ನು ಆಯೋಜಿಸುತ್ತದೆ.

ಉಸ್ತುವಾರಿ ಪ್ರಧಾನಿ ನೇಮಕ ಆಗುವವರೆಗೂ ಇಮ್ರಾನ್ ಖಾನ್ ಅವರು ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಅಧ್ಯಕ್ಷ ಅಲ್ವಿ ಪ್ರಕಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.