ಮಾಸ್ಕೊ: ‘ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಡು ವೈರಿ ಎಂದೇ ಬಿಂಬಿತರಾಗಿರುವ ಹಾಗೂ ಬಂಧನದಲ್ಲಿರುವ ರಷ್ಯಾದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಾಲ್ನಿ (44) ಅವರ ಆರೋಗ್ಯ ಪರಿಸ್ಥಿತಿ ಹದಗೆಡುತ್ತಿದೆ. ಅವರು ಸಾವಿನ ಅಂಚಿನಲ್ಲಿದ್ದಾರೆ’ ಎಂದು ವೈದ್ಯರೊಬ್ಬರು ತಿಳಿಸಿದ್ದಾರೆ.

‘ಜೈಲಿನಲ್ಲಿ ನನ್ನ ವೈಯಕ್ತಿಕ ವೈದ್ಯರುಗಳನ್ನು ಭೇಟಿ ಮಾಡಲು ಅವಕಾಶ ನೀಡಬೇಕು’ ಎಂದು ಆಗ್ರಹಿಸಿ ಕಳೆದ ಮೂರು ವಾರಗಳಿಂದ ಅಲೆಕ್ಸಿ ನವಾಲ್ನಿ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಇದು ಅವರ ದೇಹದ ಸ್ಥಿತಿಯನ್ನು ಇನ್ನಷ್ಟು ಜರ್ಜರಿತಗೊಳಿಸಿದೆ.

‘ನವಾಲ್ನಿ ಆರೋಗ್ಯದ ಪರೀಕ್ಷೆಗಳ ವರದಿಯನ್ನು ಅವರ ಕುಟುಂಬದವರು ನನಗೆ ನೀಡಿದ್ದರು. ನವಾಲ್ನಿ ಅವರ ದೇಹದಲ್ಲಿ ಪೊಟ್ಯಾಸಿಯಂ ಪ್ರಮಾಣ ಹೆಚ್ಚುತ್ತಿರುವುದು ವರದಿಯಿಂದ ತಿಳಿದುಬಂದಿದೆ. ಇದು ಹೃದಯಾಘಾತಕ್ಕೆ ಕಾರಣವಾಗಬಹುದು. ಅಲ್ಲದೆ ಇದರಿಂದಾಗಿ ಮೂತ್ರಪಿಂಡವನ್ನು ದುರ್ಬಲಗೊಳಿಸುವ ಕ್ರಿಯೇಟಿನೈನ್ ಮಟ್ಟವೂ ಹೆಚ್ಚಬಹುದು. ಹಾಗಾಗಿ ನವಾಲ್ನಿ ಯಾವ ಕ್ಷಣದಲ್ಲೂ ಸಾವಿಗೀಡಾಗಬಹುದು’ ಎಂದುವೈದ್ಯ ಯಾರೋಸ್ಲಾವ್ ಆಶಿಕ್ಮಿನ್ ಶನಿವಾರ ಮಾಹಿತಿ ನೀಡಿದರು.

ಈ ಬಗ್ಗೆ ಯಾರೋಸ್ಲಾವ್ ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

‘ಇದು ಸರಿಯಾದ ನಡೆಯಲ್ಲ. ಇದು ಅನ್ಯಾಯ’ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ... Covid-19 India Update: 2.61 ಲಕ್ಷ ಹೊಸ ಪ್ರಕರಣ, 1,501 ಮಂದಿ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.