ಬೀಜಿಂಗ್: ಚೀನಾದ ದಕ್ಷಿಣ ಭಾಗದ ಪರ್ವತ ಪ್ರದೇಶದಲ್ಲಿ ಸೋಮವಾರ ಪತನವಾದ ವಿಮಾನದಲ್ಲಿದ್ದ 132 ಪ್ರಯಾಣಿಕರಲ್ಲಿ ಯಾರೊಬ್ಬರೂ ಬದುಕುಳಿದಿರುವುದು ಗೊತ್ತಾಗಿಲ್ಲ. ಆದಾಗ್ಯೂ, ವಿಮಾನ ಪತನವಾದ ಸ್ಥಳದಲ್ಲಿ ಮಂಗಳವಾರವೂ ಶೋಧ ಕಾರ್ಯಾಚರಣೆ ಮುಂದುವರಿಯಿತು.

ಜತೆಗೆ ವಿಮಾನದಪತನಕ್ಕೆ ಕಾರಣವೇನು ಎಂಬುದರ ತನಿಖೆಗೆ ಸಹಕಾರಿಯಾಗುವ ಬ್ಲಾಕ್ ಬಾಕ್ಸ್ ಸಹ ಇನ್ನೂ ಪತ್ತೆಯಾಗಿಲ್ಲ.ವಿಮಾನ ಪತನವಾಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಸಿಬ್ಬಂದಿ, ಸೋಮವಾರ ರಾತ್ರಿಯಿಡೀ ಶೋಧ ಕಾರ್ಯಾಚರಣೆ ನಡೆಸಿದರು. ವಿಮಾನ ದುರಂತದ ತನಿಖೆಗೆ ಚೀನಾ ಈಸ್ಟರ್ನ್ ಏರ್‌ಲೈನ್ಸ್ ಜೊತೆ ಸಹಕರಿಸುವುದಾಗಿ ಬೋಯಿಂಗ್ ಸಂಸ್ಥೆ ತಿಳಿಸಿದೆ.

ದುರಂತದ ಹಿನ್ನೆಲೆಯಲ್ಲಿ ತನ್ನಲ್ಲಿರುವ ಎಲ್ಲಾ ಬೋಯಿಂಗ್737-800 ವಿಮಾನಗಳ ಹಾರಾಟವನ್ನು ಚೀನಾ ಈಸ್ಟರ್ನ್ ಏರ್‌ಲೈನ್ಸ್ ಸ್ಥಗಿತಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.