ನವದೆಹಲಿ: ರಾತ್ರಿ ಕರ್ಫ್ಯೂ ಹೇರುವುದರಿಂದ ಕೊರೊನಾ ವೈರಸ್‌ನ ರೂಪಾಂತರಗಳ ಹರಡುವಿಕೆ ತಡೆಯಬಹುದು ಎಂಬುದಕ್ಕೆ ವೈಜ್ಞಾನಿಕ ಆಧಾರಗಳಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ)ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.

ಟಿವಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಸೋಂಕು ಹರಡುವಿಕೆ ತಡೆಯಲು ಭಾರತದಂಥ ದೇಶಗಳು ವೈಜ್ಞಾನಿಕ ಆಧಾರದಲ್ಲಿ ನೀತಿಗಳನ್ನು ರೂಪಿಸಬೇಕು ಎಂದು ಎಂದು ಹೇಳಿದ್ದಾರೆ.

ರಾತ್ರಿ ಕರ್ಫ್ಯೂನಂಥ ನಿರ್ಧಾರಗಳಿಗೆ ವೈಜ್ಞಾನಿಕ ಆಧಾರಗಳಿಲ್ಲ. ಸಾಕ್ಷ್ಯಾಧಾರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ನೈಟ್ ಕರ್ಪ್ಯೂ ಜಾರಿಗೆ ಕಟ್ಟುನಿಟ್ಟಿನ ಕ್ರಮ; ರೆಸಾರ್ಟ್, ಹೋಂ ಸ್ಟೇಗಳಿಗೆ ಹೊಡೆತ

ಮನರಂಜನಾ ಚಟುವಟಿಕೆಗಳು ನಡೆಯುವ ಪ್ರದೇಶಗಳಲ್ಲಿ ಸ್ವಲ್ಪಮಟ್ಟಿಗೆ ವೈರಸ್ ಹರಡುವಿಕೆ ಹೆಚ್ಚಿರುವುದು ನಿಜ. ಇಂಥ ಕಡೆಗಳಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸುವುದು ಸಹಜ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತೀಯರು ಸಿದ್ಧವಾಗಿರಬೇಕು, ಆದರೆ ಗಾಬರಿಬೀಳುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

‘ಭಾರತದಲ್ಲಿ ಓಮೈಕ್ರಾನ್ ಪ್ರಕರಣಗಳಲ್ಲಿ ಏರಿಕೆ ಕಾಣುವ ಸಾಧ್ಯತೆ ಇದೆ. ಈಗ ಕೆಲವು ನಗರಗಳಲ್ಲಿ ಓಮೈಕ್ರಾನ್ ಹರಡುವಿಕೆ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೋಂಕಿತರಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ರಾತ್ರಿ ಕರ್ಫ್ಯೂ| ಓಡಾಟ ನಿಯಂತ್ರಿಸಿ, ಕಿರುಕುಳ ನೀಡದಿರಿ: ನಾಗರಿಕರ ಮನವಿ

ಭಾರತದಲ್ಲಿ 24 ಗಂಟೆ ಅವಧಿಯಲ್ಲಿ 309 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಸೋಂಕಿತರಾದವರ ಸಂಖ್ಯೆ 1,270ಕ್ಕೆ ಏರಿಕೆಯಾಗಿದೆ. 374 ಮಂದಿ ಸೋಂಕಿತರು ಈವರೆಗೆ ಚೇತರಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.