ವಿಶ್ವಸಂಸ್ಥೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 25 ರಂದು ನಡೆಯಲಿರುವ ವಿಶ್ವಸಂಸ್ಥೆಯ ವಾರ್ಷಿಕ ಮಹಾ ಅಧಿವೇಶನದಲ್ಲಿ ಭೌತಿಕವಾಗಿ ಪಾಲ್ಗೊಂಡು, ಭಾಷಣ ಮಾಡುವ ನಿರೀಕ್ಷೆ ಇದೆ.

76ನೇ ಮಹಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುವವರ ತಾತ್ಕಾಲಿಕ ಪಟ್ಟಿಯನ್ನು ವಿಶ್ವಸಂಸ್ಥೆ ಬಿಡುಗಡೆ ಮಾಡಿದ್ದು, ಮೋದಿಯವರ ಹೆಸರು ಈ ಪಟ್ಟಿಯಲ್ಲಿದೆ.

ಅಮೆರಿಕ ಹಾಗೂ ಇತರ ರಾಷ್ಟ್ರಗಳಲ್ಲಿ ಕೊರೊನಾ ವೈರಸ್‌ನ ರೂಪಾಂತರ ಡೆಲ್ಟಾ ತಳಿಯ ಸೋಂಕಿನ ಪ್ರಸರಣ ತೀವ್ರವಾಗುತ್ತಿದೆ. ಹೀಗಾಗಿ, ಜಾಗತಿಕ ನಾಯಕರ ಪೈಕಿ ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಹಾಗೂ ಸೋಂಕಿನ ತೀವ್ರತೆಯ ಆಧಾರದಲ್ಲಿ ಮಹಾ ಅಧಿವೇಶನದ ಕಾರ್ಯಕ್ರಮದಲ್ಲಿ ಬದಲಾವಣೆಯ ಸಾಧ್ಯತೆ ಇದೆ ಎಂದು ವಿಶ್ವಸಂಸ್ಥೆ ಪ್ರಕಟಣೆ ತಿಳಿಸಿದೆ.

2019ರಲ್ಲಿ ನ್ಯೂಯಾರ್ಕ್‌ಗೆ ತೆರಳಿದ್ದ ಮೋದಿ, ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಭಾಗವಹಿಸಿದ್ದರು.

ಪಿಎಸ್ಐ ನೇಮಕಾತಿ: ದೈಹಿಕ ಸಾಮರ್ಥ್ಯ ಪರೀಕ್ಷೆ, ಎರಡೂವರೆ ತಿಂಗಳ ಗರ್ಭಿಣಿ ಯಶಸ್ವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.