ಕೀವ್: ನಗರದ ವಸತಿ ಕಟ್ಟಡವೊಂದರ ಮೇಲೆ ರಷ್ಯಾ ನಡೆಸಿದ ರಾಕೆಟ್ ದಾಳಿಯಲ್ಲಿ ಉಕ್ರೇನ್ ನಟಿ ಒಕ್ಸಾನಾ ಶ್ವೆಟ್ಸ್ ಮೃತಪಟ್ಟಿದ್ದಾರೆ.

ಒಕ್ಸಾನಾ ಅವರಿಗೆ 67 ವರ್ಷವಯಸ್ಸಾಗಿತ್ತು. ಅವರು ಉಕ್ರೇನ್ನ ‘ಅತ್ಯುನ್ನತ ಕಲಾವಿದೆ’ಗೌರವಕ್ಕೆ ಪಾತ್ರರಾಗಿದ್ದರು.

ಒಕ್ಸಾನಾ ಅವರ ಹತ್ಯೆಯನ್ನು ದೃಢಪಡಿಸಿರುವ ಅವರ ಯಂಗ್ ಥಿಯೇಟರ್ ತಂಡ ಹೇಳಿಕೆಯನ್ನು ಹೊರಡಿಸಿದ್ದು ಅದರಲ್ಲಿ, ಕೀವ್ನ ವಸತಿ ಕಟ್ಟಡದ ಮೇಲೆ ನಡೆದ ರಾಕೆಟ್ ದಾಳಿಯಲ್ಲಿ ಖ್ಯಾತ ಕಲಾವಿದೆ ಒಕ್ಸಾನಾ ಶ್ವೆಟ್ಸ್ ನಿಧನರಾಗಿದ್ದಾರೆ ಎಂದು ಖಚಿತಪಡಿಸಿದೆ.

ಫೆ.24 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಸೇನಾ ಕಾರ್ಯಾಚರಣೆಯನ್ನು ಘೋಷಿಸಿದ್ದರು. ಅಂದಿನಿಂದ ರಷ್ಯಾ ಪಡೆಗಳು ಉಕ್ರೇನ್ ಮೇಲೆ ಆಕ್ರಮಣವನ್ನು ಮುಂದುವರಿಸಿದ್ದು, ಯೋಧರು, ನಾಗರಿಕರು ಸೇರಿದಂತೆ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ವಿಶ್ವಸಂಸ್ಥೆ ಮಾನವ ಹಕ್ಕುಗಳ ಹೈ ಕಮಿಷನರ್ ಕಚೇರಿಯ ಪ್ರಕಾರ, ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ಆರಂಭವಾದಾಗಿನಿಂದ ಉಕ್ರೇನ್ನಲ್ಲಿ ಸುಮಾರು 600 ನಾಗರಿಕರು ಮೃತಪಟ್ಟಿದ್ದು, 1,000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಓದಿ...ಉಕ್ರೇನ್ನಲ್ಲಿ ಹದಗೆಡುತ್ತಿರುವ ಮಾನವೀಯ ಪರಿಸ್ಥಿತಿ: ಭಾರತ ಕಳವಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.