ಕೀವ್: ರಷ್ಯಾ –ಉಕ್ರೇನ್ ಯುದ್ಧ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಭಯ ರಾಷ್ಟ್ರಗಳು ಶಾಂತಿ ಕಾಪಾಡುವಂತೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ಝೆಲೆನ್ಸ್ಕಿ ಮನವಿ ಮಾಡಿದ್ದಾರೆ.

ಬುಧವಾರ ತಡರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಅವರು, ‘ಉಕ್ರೇನ್ ರಾಷ್ಟ್ರವು ರಷ್ಯಾಕ್ಕೆ ಅಪಾಯವನ್ನುಂಟು ಮಾಡುತ್ತದೆ ಎಂಬ ಮಾಸ್ಕೋದ ಹೇಳಿಕೆಗಳನ್ನು ತಿರಸ್ಕರಿಸುತ್ತೇವೆ. ರಷ್ಯಾದ ಆಕ್ರಮಣದಿಂದ ಹತ್ತಾರು ಜನರು ಪ್ರಾಣ ಕಳೆದುಕೊಳ್ಳಲಿದ್ದಾರೆ’ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

‘ಉಕ್ರೇನ್ನ ನಾಗರಿಕರು ಮತ್ತು ಸರ್ಕಾರ ಶಾಂತಿಯನ್ನು ಬಯಸುತ್ತದೆ. ಆದರೆ, ಒಂದು ವೇಳೆ ರಾಷ್ಟ್ರದ ಮೇಲೆ ದಾಳಿ ನಡೆದರೆ ನಾವು ಹೋರಾಟ ನಡೆಸಲು ಸಿದ್ಧರಿದ್ದೇವೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ರಷ್ಯಾದಿಂದ ಆಕ್ರಮಣ ಭೀತಿ ಹೆಚ್ಚಿದ ಬೆನ್ನಲ್ಲೇ ಬುಧವಾರ ಉಕ್ರೇನ್ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಇದು ಫೆಬ್ರುವರಿ 24ರಿಂದ ಜಾರಿಗೆ ಬರಲಿದ್ದು, 30 ದಿನಗಳವರೆಗೆ ಜಾರಿಯಲ್ಲಿರಲಿದೆ.

ಈ ಮಧ್ಯೆ, ಪೂರ್ವ ಉಕ್ರೇನ್ನಲ್ಲಿ ಬಂಡುಕೋರರ ಹಿಡಿತದಲ್ಲಿರುವ ಎರಡು ಪ್ರದೇಶಗಳನ್ನು ಆಕ್ರಮಿಸಿಕೊಳ್ಳಲು ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್, ಸೇನಾ ಪಡೆಗಳನ್ನು ನಿಯೋಜಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ಝೆಲೆನ್ಸ್ಕಿ ಅವರು ಸೇನೆಯ 2 ಲಕ್ಷಕ್ಕೂ ಹೆಚ್ಚು ಮೀಸಲು ಸಿಬ್ಬಂದಿಗೆ ಕರ್ತವ್ಯಕ್ಕೆ ಮರಳಲು ಸೂಚಿಸಿದ್ದಾರೆ. ಈ ಬೆಳವಣಿಗೆಗಳು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿವೆ.

ಓದಿ...ಯುದ್ಧ ಭೀತಿ: ಉಕ್ರೇನ್ನಲ್ಲಿ ತುರ್ತು ಪರಿಸ್ಥಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.